ರಿಯಾದ್: ಸಾಮಾಜಿಕ ಮಾಧ್ಯಮಗಳಲ್ಲಿ ಪುರಾವೆ ರಹಿತ ವರದಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸೌದಿ ಪಬ್ಲಿಕ್ ಪ್ರಾಸಿಕ್ಯೂಷನ್ ಹೇಳಿದೆ.
ಸಾಮಾಜಿಕ ಮಾಧ್ಯಮದಲ್ಲಿ ವದಂತಿಗಳನ್ನು ಹರಡುವ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.ಆಡಳಿತಗಾರರು ಮತ್ತು ಉನ್ನತ ಅಧಿಕಾರಿಗಳು ಹೇಳಿಕೆ ನೀಡಿರುವುದಾಗಿ ನಕಲಿ ಸಂದೇಶಗಳನ್ನು ರವಾನಿಸಲಾಗುವ ಹಿನ್ನೆಲೆಯಲ್ಲಿ ಈ ನಡೆ ಎನ್ನಲಾಗಿದೆ.
ಸುಳ್ಳು ಸುದ್ದಿಗಳನ್ನು ಹರಡುವವರಿಗೆ ಐದು ವರ್ಷಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಇದಲ್ಲದೆ, 30 ಲಕ್ಷ ರಿಯಾಲ್ ದಂಡವನ್ನು ವಿಧಿಸಲಾಗುವ ಅಪರಾಧವಾಗಿದೆ ಎಂದು ಸಾರ್ವಜನಿಕ ಪ್ರಾಸಿಕ್ಯೂಷನ್ ಹೇಳಿದೆ.
ದೇಶದ ಕಾನೂನು ಮತ್ತು ಸುವ್ಯವಸ್ಥೆಯನ್ನು ಮುರಿಯಲು ಕೆಲವರು ಉದ್ದೇಶಪೂರ್ವಕವಾಗಿ ಕೆಲವರು ಸುಳ್ಳು ಸುದ್ದಿಗಳನ್ನು ಸೃಷ್ಟಿಸುತ್ತಿದ್ದಾರೆ. ಇದನ್ನು ಅಂತರ್ಜಾಲ ಮತ್ತು ಮೊಬೈಲ್ ಫೋನ್ ಸಂದೇಶಗಳಾಗಿ ರವಾನಿಸುವುದು ಸೈಬರ್ ಕ್ರೈ ವಿರೋಧಿ ಕಾನೂನಿನ ಪ್ರಕಾರ ಶಿಕ್ಷಾರ್ಹವಾಗಿದೆ.
ದೇಶಕ್ಕೆ ಸಂಬಂಧಿಸಿದ ಸಂದೇಶಗಳನ್ನು ಇತರರಿಗೆ ರವಾನಿಸುವ ಮೊದಲು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆಯೇ ಎಂಬುದನ್ನು ಖಾತರಿ ಪಡಿಸುವಂತೆ ಸಾರ್ವಜನಿಕ ಪ್ರಾಸಿಕ್ಯೂಷನ್ ಹೇಳಿದೆ.