ಉಡುಪಿ: ಎಸ್ಸೆಸ್ಸೆಫ್ ರಾಜ್ಯ ಸಮಿತಿ ವತಿಯಿಂದ ಉಡುಪಿ ಜಿಲ್ಲ್ಲಾ ವ್ಯಾಪ್ತಿಯ ಡಿವಿಷನ್ ಗಳ ಯುನಿಟ್ ಗಳಿಂದ ಆಯ್ದ ಸಕ್ರೀಯ ಕಾರ್ಯಕರ್ತರ ಸಂಗಮವು ಎಸ್ಸೆಸ್ಸೆಫ್ ಉಡುಪಿ ಜಿಲ್ಲಾಧ್ಯಕ್ಷ ಅಶ್ರಫ್ ಅಂಜದಿ ಉಸ್ತಾದರ ಅಧ್ಯಕ್ಷತೆಯಲ್ಲಿ ಉಚ್ಚಿಲದಲ್ಲಿ ನಡೆಯಿತು.
ಎಸ್ಸೆಸ್ಸೆಫ್ ರಾಜ್ಯ ನಾಯಕ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಸುಫಿಯಾನ್ ಸಖಾಫಿ ತರಗತಿಯನ್ನು ನಡೆಸಿದರು.
ಎಸ್.ವೈ.ಎಸ್ ಉಡುಪಿ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ರಹ್ಮಾನ್ ರಝ್ವಿ ಕಲ್ಕಟ್ ಪ್ರಾಸ್ತವಿಕವಾಗಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಹಜ್ ಯಾತ್ರೆ ಕೈಗೊಳ್ಳಲಿರುವ ಎಸ್.ವೈ.ಎಸ್ ಉಡುಪಿ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ರಝ್ವಿ ಕಲ್ಕಟ್ ಹಾಗೂ ಉಸ್ಮಾನ್ ರವರನ್ನು ಎಸ್ಸೆಸ್ಸೆಫ್ ಉಡುಪಿ ಜಿಲ್ಲೆ ಹಾಗೂ ಉಚ್ಚಿಲ ಯುನಿಟ್ ವತಿಯಿಂದ ಸನ್ಮಾನಿಸಲಾಯಿತು.
ಎಸ್ಸೆಸ್ಸೆಫ್ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ನಾಸಿರ್ ಬದ್ರಗಿರಿ ಸ್ವಾಗತಿಸಿ,ಪ್ರಧಾನ ಕಾರ್ಯದರ್ಶಿ ಎನ್.ಸಿ.ಅಬ್ದುಲ್ ರಹೀಂ ಹೊಸ್ಮಾರ್ ವಂದಿಸಿದರು.