janadhvani

Kannada Online News Paper

ಮೇಕೆಯನ್ನೂ ‘ಮಾತೆ’ ಪಟ್ಟಿಗೆ ಸೇರಿಸಿದ ಬಿಜೆಪಿ ನೇತಾರ

ಕೊಲ್ಕತ್ತಾ: ಗೋಮಾಂಸ  ಸೇವನೆ ಬಗ್ಗೆ ದೇಶದಾದ್ಯಂತ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿ ಬಿಜೆಪಿ ನೇತಾರರೊಬ್ಬರು ಮೇಕೆಯನ್ನೂ ‘ಮಾತೆ’ ಪಟ್ಟಿಗೆ ಸೇರಿಸಿ ಅಚ್ಚರಿಯುಂಟು ಮಾಡಿದ್ದಾರೆ.


ಗಾಂಧೀಜಿಯವರು ಮೇಕೆ ಹಾಲು ಕುಡಿಯುತ್ತಿದ್ದುದರಿಂದ ಅದನ್ನು ಮಾತೆ ಎಂದು ಪರಿಗಣಿಸುತ್ತಿದ್ದರು. ಹಾಗಾಗಿ ಹಿಂದೂಗಳು ಮೇಕೆಯನ್ನು ಮಾತೆ ಎಂದು ಪರಿಗಣಿಸಿ ಮಟನ್ ಸೇವನೆ ನಿಲ್ಲಿಸಬೇಕು ಎಂದು ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷ ಚಂದ್ರ ಕುಮಾರ್ ಬೋಸ್ ಟ್ವೀಟಿಸಿದ್ದಾರೆ. ಚಂದ್ರ ಕುಮಾರ್ ಬೋಸ್ ನೇತಾಜಿ ಸುಭಾಶ್ ಚಂದ್ರ ಬೋಸ್ ಅವರ ಸಂಬಂಧಿ.

ತ್ತಾದ ವುಡ್‍ಬರ್ನ್ ಪಾರ್ಕ್ ನಲ್ಲಿರುವ ನನ್ನ ತಾತ ಸರತ್ ಚಂದ್ರ ಬೋಸ್ ಅವರ ಮನೆಯಲ್ಲಿ ವಾಸವಾಗಿದ್ದರು. ಅಲ್ಲಿ ಅವರು ಮೇಕೆ ಹಾಲನ್ನೇ ಸೇವಿಸುತ್ತಿದ್ದರು. ಅಲ್ಲಿ ಹಾಲಿಗಾಗಿಯೇ ಎರಡು ಮೇಕೆಗಳನ್ನು ಖರೀದಿಸಲಾಗಿತ್ತು. ಹಿಂದೂಗಳ ರಕ್ಷಕನಾಗಿದ್ದ ಗಾಂಧಿ ಮೇಕೆ ಹಾಲು ಸೇವಿಸುತ್ತಿದ್ದುದರಿಂದ ಮೇಕೆಯನ್ನು ಮಾತೆ ಎಂದು ಪರಿಗಣಿಸುತ್ತಿದ್ದರು. ಹಿಂದೂಗಳು ಮೇಕೆ ಮಾಂಸ ಸೇವನೆ ನಿಲ್ಲಿಸಬೇಕು ಎಂದು ಬೋಸ್ ಟ್ವೀಟ್ ಮಾಡಿದ್ದಾರೆ.

ಬೋಸ್ ಅವರ ಈ ಟ್ವೀಟ್‍ಗೆ ಪ್ರತಿಕ್ರಿಯಿಸಿದ ಬಿಜೆಪಿ ಹಿರಿಯ ನಾಯಕ, ತ್ರಿಪುರಾ ರಾಜ್ಯಪಾಲ ತಥಾಗತ ರಾಯ್ ಅವರು, ಗಾಂಧೀಜಿ ಅಥವಾ ನಿಮ್ಮ ತಾತ ಮೇಕೆಯನ್ನು ಯಾವತ್ತೂ ಮಾತೆ ಎಂದು ಪರಿಗಣಿಸಿಲ್ಲ. ಸ್ವತಃ ಗಾಂಧೀಜಿಯಾಗಲೀ ಬೇರೆ ಯಾರೇ ಆಗಲಿ, ಗಾಂಧೀಜಿ ಹಿಂದೂಗಳ ರಕ್ಷಕ ಎಂದು ಬಿಂಬಿಸಿಲ್ಲ. ನಾವು ಗೋವುಗಳನ್ನು ಮಾತೆ ಎಂದು ಪರಿಗಣಿಸುತ್ತೇವೆಯೇ ಹೊರತು ಮೇಕೆಯನ್ನಲ್ಲ, ದಯವಿಟ್ಟು ಈ ರೀತಿ ಅಸಂಬದ್ಧ ಮಾತುಗಳನ್ನಾಡಬೇಡಿ ಎಂದಿದ್ದಾರೆ.

error: Content is protected !! Not allowed copy content from janadhvani.com