ರಿಯಾದ್ :ಸೌದಿ ಉದ್ಯೋಗ ಮತ್ತು ಸಮಾಜ ಕಲ್ಯಾಣ ಸಚಿವಾಲಯವು, ಗೃಹ ವಲಯಕ್ಕೆ ಕೆಲಸವನ್ನು ಬದಲಾಯಿಸಲು ಅನುಮತಿಸಲಾಗುವುದಿಲ್ಲ ಎಂದು ಹೇಳಿದೆ. ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಚಾಲಕ,ಮನೆ ಕೆಲಸ, ಅಡುಗೆ, ಆರೈಕೆ ಮಾಡುವವರು ಮುಂತಾದ ಗೃಹ ಕೆಲಸಕ್ಕೆ ನೇಮಿಸಿಕೊಳ್ಳಲಾಗುವುದಿಲ್ಲ.
ಸೆಪ್ಟೆಂಬರ್ 12 ರಿಂದ ಖಾಸಗಿ ವಲಯದಲ್ಲಿನ ವಿದೇಶೀ ಕೆಲಸಗಾರರಿಗೆ ಕೆಲಸ ಬದಲಾಯಿಸುವ ಅನುಮತಿ ನೀಡಲಿದೆ ಎಂದು ಸಚಿವಾಲಯ ಇತ್ತೀಚೆಗೆ ಘೋಷಿಸಿದ್ದವು. ಅದಕ್ಕೆ ಅನುಗುಣವಾಗಿ ಸಚಿವಾಲಯದ ವಿವರಣೆಯು ಹೊರಬಿದ್ದಿದ್ದು, ವೈದ್ಯರು, ಇಂಜಿನಿಯರ್ ಮತ್ತು ಅಕೌಂಟೆಂಟ್ ಗಳ ಪೋಸ್ಟ್ ಗಳನ್ನು ಬದಲಿಸಲು ಸಂಬಂಧಪಟ್ಟ ಕೌನ್ಸಿಲ್ನ ಪ್ರಮಾಣಪತ್ರವನ್ನೂ ಒಳಗೊಂಡಂತೆ ಕಾರ್ಮಿಕ ಕಚೇರಿಯನ್ನು ಸಂಪರ್ಕಿಸಬೇಕಾಗಿದೆ.
ಆಯಾ ಕ್ಷೇತ್ರಗಳಲ್ಲಿ ಪರಿಣತಿ, ಅನುಭವವನ್ನು ಹೊಂದಿರುವವರಿಗೆ ಮಾತ್ರ ಇಲಾಖೆಯಿಂದ ಅಭ್ಯಾಸ ಸರ್ಟಿಫಿಕೇಟ್ ಲಭಿಸುತ್ತದೆ.ಈ ಪ್ರಮಾಣಪತ್ರವನ್ನು ಹೊಂದಿಲ್ಲದವರ ಅರ್ಜಿಯನ್ನು ತಿರಸ್ಕರಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ. ಆದಾಗ್ಯೂ, ಇತರ ಪೋಸ್ಟ್ ಗೆ ಬದಲಾಯಿಸಲು ಬಯಸುವವರು ಆಯಾ ಸಂಸ್ಥೆಗಳ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ