ಬೆಂಗಳೂರು:ಎಸ್ಸೆಸ್ಸೆಫ್ ರಾಜ್ಯ ಕ್ಯಾಂಪಸ್ ನಿಂದ ಕ್ಯಾಂಪಸ್ ಲೀಡರ್ಸ್ ಅಸೆಂಬ್ಲಿ ರಾಜ್ಯ ಕ್ಯಾಂಪಸ್ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ ರವರ ಅಧ್ಯಕ್ಷತೆಯಲ್ಲಿ ಎಸ್ಸೆಸ್ಸೆಫ್ ರಾಜ್ಯ ಕಛೇರಿ ಬೆಂಗಳೂರಿನಲ್ಲಿ ನಡೆಯಿತು.
ಎಸ್ಸೆಸ್ಸೆಫ್ ರಾಜ್ಯ ಸದಸ್ಯ ತಾಜುದ್ದೀನ್ ಫಾಳಿಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಶರೀಫ್ ಮಾಸ್ಟರ್ ಬೆಂಗಳೂರು,ರಾಜ್ಯ ಸದಸ್ಯ ಮುಸ್ತಫಾ ನಯೀಮಿ ಮೋಂಟುಗೋಳಿ,ಎಸ್.ವೈ.ಎಸ್.ಜಿಲ್ಲಾ ಕಾರ್ಯದರ್ಶಿ ಮುಜೀಬ್ ಸಖಾಫಿ ತರಗತಿಯನ್ನು ನಡೆಸಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ಬೆಂಗಳೂರು ಜಿಲ್ಲಾ ನಾಯಕರಾದ ಶಾಫಿ ಸ ಅದಿ ಬೆಂಗಳೂರು,ಹಕೀಂ ಬೆಂಗಳೂರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಸ್ವಾಗತಿಸಿ,ಕೊನೆಗೆ ವಂದಿಸಿದರು.