ವರದಿಯಲ್ಲಿ ಲೋಪಗಳು ಸಹಜ, ಮಾಧ್ಯಮಗಳ ಸ್ವಾತಂತ್ರ್ಯವನ್ನು ಕಸಿದುಕೊಳ್ಳಬೇಡಿ-ಸುಪ್ರಿಂ

ಹೊಸದಿಲ್ಲಿ:-ಕೆಲವೊಂದು ವ್ಯಕ್ತಿಗಳು ಹಗರಣಗಳಲ್ಲಿ ಶಾಮೀಲಾಗಿರುವ ಬಗ್ಗೆ ವರದಿ ಮಾಡುವಾಗ ಸಣ್ಣಪುಟ್ಟ ಲೋಪಗಳು ಉಂಟಾಗುವುದು ಸಹಜ. ಆದರೆ ಇದು ಮಾನನಷ್ಟ ವಾಗುವುದಿಲ್ಲ. ಒಂದು ವೇಳೆ ಸಂವಿಧಾನಾತ್ಮಕ ಅಂಶಗಳಿದ್ದರೂ ಮಾನ ಹಾನಿಯಾಗುವುದಿಲ್ಲ.ಮಾಧ್ಯಮಗಳು ಸಂಪೂರ್ಣವಾಗಿ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅನುಭವಿಸಬಹುದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

ಸೆ.12 ರಂದು ಪಾಟ್ನಾ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ತಮ್ಮ ಹಾಗೂ ಕುಟುಂಬ ಸದಸ್ಯರ ವಿರುದ್ಧ ಪತ್ರಕರ್ತರು ತಪ್ಪು ವರದಿಗಳನ್ನು ಪ್ರಸಾರ ಮಾಡಿದ್ದಾರೆ. ಮಹಿಳೆಯೊಬ್ಬರು ಅರ್ಜಿ ಸಲ್ಲಿಸಿದ್ದರು. ತಮ್ಮ ತಾಯಿ ಬಿಹಾರ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ತಂದೆ ಹಿರಿಯ ಸರ್ಕಾರಿ ಅಧಿಕಾರಿಯಾಗಿದ್ದಾರೆಂದು ಪುತ್ರಿ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.ಏಪ್ರಿಲ್ 2010ರಲ್ಲಿ ಈ ಸುದ್ದಿ ಪ್ರಸಾರವಾಗಿತ್ತು. ಉದ್ದೇಶಿತ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲು ಬಿಹಾರ ಕೈಗಾರಿಕಾ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಜಾಗವನ್ನು ಕಾನೂನು ಪ್ರಕಾರವೇ ನಿಗದಿ ಮಾಡಿತ್ತು.

ತಮ್ಮ ಹಾಗೂ ತಂದೆ- ತಾಯಿಯ ವಿರುದ್ಧ ಅವಹೇಳನಕಾರಿಯಾಗಿ ಬಿಂಬಿಸಿ ವರದಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಈ ಸುದ್ಧಿ ವರದಿ ಮಾಡಿದ ಪತ್ರಕರ್ತರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು ಎಂದು ಅರ್ಜಿಯಲ್ಲಿ ವಿವರಿಸಿದ್ದರು. ಈ ಅರ್ಜಿಯ ವಿಚಾರ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಪೀಠದ ಮುಂದೆ ನಡೆಯಿತು. ಅರ್ಜಿದಾರರ ಪರ ವಕೀಲ ವಾದ ಮಂಡಿಸುವ ವೇಳೆ ಮಧ್ಯಪ್ರವೇಶಿಸಿದ ನ್ಯಾಯಪೀಠ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಾಳ್ಮೆಯಿಂದ ಇರುವುದನ್ನು ಕಲಿಯಬೇಕು. ಈ ಪ್ರಕರಣದ ಅರ್ಜಿ ವಿಚಾರಣೆ 2011 ರಿಂದಲೂ ನಡೆಯುತ್ತಿದೆ. ಅರ್ಜಿದಾರರು ತಮ್ಮನ್ನು ತಾವು ಸಮರ್ಥಿಸಿಕೊಳ್ಳಲು ಸಾಕಷ್ಟು ಸಮಯ ಮತ್ತು ಹಣವನ್ನು ಖರ್ಚು ಮಾಡಿದ್ದಾರೆ. ಆದರೆ ಹಗರಣ ಕುರಿತು ತಪ್ಪು ಸುದ್ದಿಗಳು ಪ್ರಚಾರವಾಗಿದ್ದರೂ,ಅದು ಮಾನಹಾನಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com
error: Content is protected !!