ನವದೆಹಲಿ: ಆನ್ಲೈನ್ನಲ್ಲಿ ಮುಂಗಡವಾಗಿ ಟಿಕೆಟ್ ಕಾಯ್ದಿರಿಸುವ ಪ್ರಯಾಣಿಕರಿಗೆ ಇಲ್ಲಿಯವರೆಗೆ ಉಚಿತವಾಗಿ ನೀಡಲಾಗುತ್ತಿದ್ದ ಪ್ರಯಾಣ ವಿಮಾ ಸೌಲಭ್ಯ ಸೆಪ್ಟೆಂಬರ್ 1ರಿಂದ ರದ್ದಾಗಲಿದೆ.
ಡಿಜಿಟಲ್ ವಹಿವಾಟಿಗೆ ಉತ್ತೇಜನ ನೀಡುವ ಉದ್ದೇಶದಿಂದ ಭಾರತೀಯ ರೈಲ್ವೆ ಕೇಟರಿಂಗ್ ಮತ್ತು ಟೂರಿಸಂ ಕಾರ್ಪೋರೇಷನ್ (ಐಆರ್ಸಿಟಿಸಿ) ಡಿಸೆಂಬರ್ 2017ರಲ್ಲಿ ಉಚಿತ ವಿಮಾ ಸೌಲಭ್ಯ ಆರಂಭಿಸಿತ್ತು.
ಸೆಪ್ಟೆಂಬರ್ 1ರ ನಂತರ ಆನ್ಲೈನ್ನಲ್ಲಿ ಮುಂಗಡವಾಗಿ ಟಿಕೆಟ್ ಕಾಯ್ದಿರಿಸುವ ಪ್ರಯಾಣಿಕರು ಒಂದು ವೇಳೆ ವಿಮಾ ಸೌಲಭ್ಯ ಆಯ್ಕೆ ಮಾಡಿಕೊಂಡರೆ ಅದಕ್ಕೆ ಹೆಚ್ಚುವರಿ ಹಣ ಪಾವತಿಸಬೇಕಾಗುತ್ತದೆ. ಹೆಚ್ಚುವರಿ ಶುಲ್ಕದ ಮಾಹಿತಿಯನ್ನು ಐಆರ್ಸಿಟಿಸಿ ಶೀಘ್ರ ಪ್ರಕಟಿಸಲಿದೆ.
ರೈಲ್ವೆ ಪ್ರಯಾಣದ ವೇಳೆ ಸಂಭವಿಸುವ ಅವಘಡಗಳಲ್ಲಿ ಮೃತಪಟ್ಟ ಪ್ರಯಾಣಿಕರ ಕುಟುಂಬಕ್ಕೆ 10 ಲಕ್ಷ, ಅಂಗವೈಕಲ್ಯಕ್ಕೆ 7.5 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಮತ್ತು ಶವ ಸಾಗಿಸಲು 10 ಸಾವಿರ ವಿಮಾ ಹಣವನ್ನು ಐಆರ್ಸಿಟಿಸಿ ನೀಡುತಿತ್ತು. ಇದಕ್ಕಾಗಿ ಐಆರ್ಸಿಟಿಸಿ ಹಲವು ವಿಮಾ ಕಂಪನಿಗಳ ಜತೆ ಒಪ್ಪಂದ ಮಾಡಿಕೊಂಡಿತ್ತು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ