janadhvani

Kannada Online News Paper

ಭಾರೀ ಮಳೆ: ಆ.13ಕ್ಕೆ ದ.ಕ.ಮತ್ತು ಉಡುಪಿ ಜಿಲ್ಲೆಯ ಶಾಲಾ,ಕಾಲೇಜುಗಳಿಗೆ ರಜೆ

ಮಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಎರಡೂ ಜಿಲ್ಲೆಯ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿದ್ದಾರೆ.ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರು ರಜೆ ಘೋಷಿಸಿ ಪ್ರಕಟಣೆ ಹೊರಡಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.