ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಸೌಹಾರ್ದತೆಯ ಸಂಕೇತವಾಗಿ 27 ಮೀನುಗಾರರು ಸೇರಿದಂತೆ ಒಟ್ಟು 30 ಭಾರತೀಯರನ್ನು ಪಾಕಿಸ್ತಾನ ಸೋಮವಾರ ಬಿಡುಗಡೆಗೊಳಿಸಿದೆ.
ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ವಕ್ತಾರ ಮೊಹಮ್ಮದ್ ಫೈಸಲ್ ಅವರು, ಮಾನವೀಯ ಸಮಸ್ಯೆಗಳನ್ನು ರಾಜಕೀಯಗೊಳಿಸದಿರುವ ಪಾಕಿಸ್ತಾನ ಸ್ಥಿರ ನೀತಿಗೆ ಅನುಗುಣವಾಗಿ ಭಾರತೀಯರನ್ನು ಬಿಡುಗಡೆಗೊಳಿಸಲಾಗಿದೆ ಎಂದು ಹೇಳಿದ್ದಾರೆ.
27 ಮೀನುಗಾರರು ಸೇರಿದಂತೆ ಒಟ್ಟು 30 ಭಾರತೀಯರನ್ನು ಬಿಡುಗಡೆ ಮಾಡಲಾಗುತ್ತಿದೆ. ಪಾಕಿಸ್ತಾನ ರಾಷ್ಟ್ರದಲ್ಲಿ ಆಗಸ್ಟ್ 14 ರಂದು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿದ್ದು, ಸೌಹಾರ್ದತೆಯ ಸಂಕೇತವಾಗಿ ಭಾರತೀಯರನ್ನು ಬಿಡುಗಡೆ ಮಾಡಲಾಗುತ್ತಿದೆ.
ಭಾರತ ಕೂಡ ಇದೇ ರೀತಿಯಲ್ಲಿಯೇ ನಡೆದುಕೊಳ್ಳಲಿದೆ ಎಂಬ ವಿಶ್ವಾಸ ನಮಗಿದೆ ಎಂದು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ