janadhvani

Kannada Online News Paper

ಘಾಟ್ ರಸ್ತೆಗಳಲ್ಲಿ ಗುಡ್ಡೆ ಕುಸಿತ: ಶಿರಾಡಿಘಾಟ್ ಮತ್ತು ಸಂಪಾಜೆ ರಸ್ತೆ ಬಂದ್-ಜಿಲ್ಲಾಧಿಕಾರಿ

ಮಂಗಳೂರು,ಆ.15- ಭಾರೀ ಮಳೆಯಿಂದ ಗುಡ್ಡ ಕುಸಿತದಂತಹ ಘಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶಿರಾಡಿಘಾಟ್ ಮತ್ತು ಸಂಪಾಜೆ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.ಮಂಗಳೂರು ತಲುಪಲು ವಾಹನ ಸವಾರರು ಚಾರ್ಮಾಡಿ ಘಾಟ್ ರಸ್ತೆಯನ್ನು ಬಳಸಬಹುದು ಎಂದು ಅವರು ತಿಳಿಸಿದ್ದಾರೆ.

ಘಾಟ್ ರಸ್ತೆಗಳಲ್ಲಿ ಗುಡ್ಡೆ ಕುಸಿತ ಘಟನೆಗಳು ಕಳೆದೆರಡು ದಿನಗಳಲ್ಲಿ ಹೆಚ್ಚಾಗಿ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಎರಡು ಘಾಟ್ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.