ಪ್ರವಾಸಿ ಕನ್ನಡಿಗರ ಹೆಮ್ಮೆಯ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ರಾಷ್ಟ್ರೀಯ ಸಮಿತಿಯ ವತಿಯಿಂದ ಭವ್ಯ ಭಾರತದ 72 ನೇ ಸ್ವಾತಂತ್ರ್ಯೊತ್ಸವದ ಅಂಗವಾಗಿ ಭಾರತ ಭಾರತೀಯರದ್ದಾಗಲಿ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಪ್ರಜಾ ಸಂಗಮ ಕಾರ್ಯಕ್ರಮವು ಖಾನ ಖಝಾನ ಸಭಾಂಗಣ ಮಸ್ಕತ್ತಿನಲ್ಲಿ ನಡೆಯಿತು.
ಸಯ್ಯದ್ ಹಂಝ ತಂಙಳ್ ಅಲ್ ರಿಫಾಯಿ ಇವರುಗಳ ದುಆದೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಕೆಸಿಎಫ್ ಒಮಾನ್ ಅಧ್ಯಕ್ಷರಾದ ಸಯ್ಯದ್ ಆಬಿದ್ ಅಲ್ ಹೈದ್ರೋಸಿ ತಂಙಳ್ರವರು ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ಸಂಘದ ಅಧ್ಯಕ್ಷರಾದ ಕರುಣಾಕರ್ ರಾವ್ ಮಸ್ಕತ್ ಇವರುಗಳು ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಕಲಂದರ್ ಭಾವ ಪರಪ್ಪು ಅವರು ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸವನ್ನು ಹಾಗೂ ಸಮಾನತೆಯ ಸಂದೇಶವನ್ನು ಸಾರಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ರಮೇಶ್ ಕುಮಾರ್, ಮೋನಬ್ಬ ಹಾಜಿ, ಇಕ್ಬಾಲ್ ಬೊಲ್ಮಾರ್, ಝುಬೈರ್ ಸಅದಿ ಪಟ್ರಕೋಡಿ, ಅಬ್ಬಾಸ್ ಉಚ್ಚಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು ಹಾಗೂ ಇವರುಗಳನ್ನು ಕೆಸಿಎಫ್ ಒಮಾನ್ ವತಿಯಿಂದ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಸಯ್ಯದ್ ಸೈಫುದ್ದೀನ್ ಅಲ್ ಹೈದ್ರೋಸಿ, ಸಯ್ಯದ್ ಸುಹೈಲ್ ಅಲ್ ಹೈದ್ರೋಸಿ, ಶಮೀರ್ ಉಸ್ತಾದ್ ಹೂಡೆ, ಆರಿಫ್ ಕೋಡಿ, ಅಯ್ಯೂಬ್ ಕೋಡಿ, ಹಂಝ ಕನ್ನಂಗಾರ್, ಅಕ್ಬರ್ ಉಪಳ್ಳಿ, ಸಂಶುದ್ದೀನ್ ಪಾಲ್ತಡ್ಕ ಹಾಗೂ ಕೆಸಿಎಫ್ ಒಮಾನ್ ರಾಷ್ಟ್ರೀಯ ಮತ್ತು ಝೋನ್ ನಾಯಕರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಇತ್ತೀಚೆಗೆ ನಿಧನರಾದ ಭಾರತದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಇವರ ನಿಧನಕ್ಕೆ ಈ ಕಾರ್ಯಕ್ರಮದಲ್ಲಿ ಸಂತಾಪ ಸೂಚಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಸಾದಿಕ್ ಕಾಟಿಪಳ್ಳ ಹಾಗೂ ಅಶ್ರಫ್ ಕುತ್ತಾರ್ ರವರುಗಳು ದೇಶಭಕ್ತಿ ಗೀತೆಯನ್ನು ಹಾಡಿದರು.
ಸಾದಿಕ್ ಸುಳ್ಯ ಸ್ವಾಗತಿಸಿ, ಇಕ್ಬಾಲ್ ಎರ್ಮಾಳ್ ವಂಧಿಸಿದರು, ಸಿದ್ದೀಕ್ ಮಾಂಬ್ಳಿ ಸುಳ್ಯ ಕಾರ್ಯಕ್ರಮ ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ