ರಿಯಾದ್: ಇತ್ತೀಚೆಗೆ ರಿಯಾದ್ ನಲ್ಲಿ ಹೃದಯಾಘಾತದಿಂದ ನಿಧನರಾದ ವಿಟ್ಲ ಮೂಲದ ವ್ಯಕ್ತಿಯ ಅಂತ್ಯ ಸಂಸ್ಕಾರವನ್ನು ಇಲ್ಲಿನ ಎಕ್ಸಿಟ್ 15 ರ ಅಲ್ ರಾಜ್’ಹಿ ಮಸೀದಿಯ ಸಾರ್ವಜನಿಕ ದಫನ ಭೂಮಿಯಲ್ಲಿ ನೆರವೇರಿಸಲಾಯಿತು.
ಬಂಟ್ವಾಳ ತಾಲೂಕಿನ ಕಡಂಬು – ಅನಿಲಕಟ್ಟೆ ನಿವಾಸಿ ಮೋನು ಬ್ಯಾರಿಯ ಹಿರಿಯ ಪುತ್ರ ಮೆಹ್ಮೂದ್ (53) ಕಳೆದ ಇಪ್ಪತ್ತು ವರ್ಷಗಳಿಂದ ಸೌದಿ ಅರೇಬಿಯಾದ ರಿಯಾದ್ ನಲ್ಲಿ ನೌಕರಿ ಮಾಡುತ್ತಿದ್ದು ಇತ್ತೀಚೆಗಷ್ಟೇ ಊರಿಗೆ ಹೋಗಿ ಮರಳಿದ್ದರು ಎನ್ನಲಾಗಿದೆ. ಮೊನ್ನೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡು ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಅಂದೇ ಆಸ್ಪತ್ರೆಯಲ್ಲಿ ಅಸುನೀಗಿದ್ದರು.
ಕರಾವಳಿ ಮೂಲದ ವ್ಯಕ್ತಿಯೊಬ್ಬರ ನಿಧನವಾಗಿದೆ ಎಂಬ ಸುದ್ದಿ ಸಿಕ್ಕಿದ ತಕ್ಷಣ ಆಸ್ಪತ್ರೆಗೆ ಧಾವಿಸಿದ ಕರ್ನಾಟಕ ಕಲ್ಚರಲ್ ಫೌಂಡೇಶನ್ ರಿಯಾದ್ ಝೋನ್ ಕಾರ್ಯಕರ್ತರು ಮೃತರ ಆಪ್ತರು ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಮೃತ ವ್ಯಕ್ತಿಯ ಮರಣೋತ್ತರ ಕ್ರಿಯೆಗೆ ಅಗತ್ಯ ಬರುವ, ವಿವಿಧ ಮೂಲಗಳಿಂದ ಸಂಗ್ರಹಿಸಬೇಕಾದ ದಾಖಲೆ ಪತ್ರಗಳನ್ನು ತ್ವರಿತ ಗತಿಯಲ್ಲಿ ಸರಿಪಡಿಸಿ, ಕುಟುಂಬದ ಅನುಮತಿ ಪಡೆದು ಇಲ್ಲೇ ದಫನ ಮಾಡಲಾಯಿತು.
ಸೌದಿ ಅರೇಬಿಯಾದ ವಲಸೆ ನೀತಿಯಡಿಯಲ್ಲಿ ಬರುವ ಕಾನೂನಿನಂತೆ ಇಲ್ಲಿ ಮೃತರಾಗುವ ವ್ಯಕ್ತಿಗಳ ಮೃತದೇಹವನ್ನು ವಾರಸುದಾರರಿಗೆ ಬಿಟ್ಟು ಕೊಡಬೇಕಾದರೆ ಅನೇಕ ಇಲಾಖೆಗಳಿಂದ ಕಡತಗಳನ್ನು ಸರಿಪಡಿಸಬೇಕಾದ ಅಗತ್ಯವಿದೆ. ಅದೇ ರೀತಿ ಊರಿನ ಕುಟುಂಬ ವರ್ಗದ ಅನುಮತಿ ಪತ್ರ ಕೂಡ ತರಿಸಬೇಕು. ಈಯೆಲ್ಲ ಕೆಲಸಗಳನ್ನೂ ತನ್ನ ಸ್ವಂತ ಕೆಲಸವನ್ನು ಬದಿಗಿಟ್ಟು ಎರಡೇ ದಿನಗಳಲ್ಲಿ ಮಾಡಿ ಮುಗಿಸಿದ ಕೆಸಿಎಫ್ ರಿಯಾದ್ ಝೋನ್ ಮುಖಂಡ ಮಜೀದ್ ವಿಟ್ಲ ರವರಿಗೆ ಮೃತರ ಕುಟುಂಬವು ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದೆ.
ಇಲ್ಲಿನ ಎಕ್ಸಿಟ್ 15 ರ ಅಲ್ ರಾಜ್’ಹಿ ಮಸೀದಿಯಲ್ಲಿ ನಡೆದ ಜನಾಝ ನಮಾಝ್ ಹಾಗೂ ಅಂತ್ಯ ಕ್ರಿಯೆಯಲ್ಲಿ ಮೃತರ ಸಹೋದರ ಹಮೀದ್, ಮೃತರ ಆಪ್ತರು, ಇತರ ಕುಟುಂಬ ಮಿತ್ರಾದಿಗಳು, ಸ್ಥಳೀಯ ನಿವಾಸಿಗಳು, ಕೆಸಿಎಫ್ ಕಾರ್ಯಕರ್ತರು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ