ಮಂಗಳೂರು: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಟೀಮ್ ಹಸನೈನ್ ಟ್ರೈನಿಂಗ್ ಕ್ಯಾಂಪ್ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಡಗು ರವರ ಅಧ್ಯಕ್ಷತೆಯಲ್ಲಿ ಸೆಪ್ಟಂಬರ್ 13 ಗುರುವಾರ ಮಧ್ಯಾಹ್ನ 2:00 ಗಂಟೆಗೆ ಅಲ್- ಮದೀನಾ ಯತೀಂ ಖಾನ ಮಂಜನಾಡಿಯಲ್ಲಿ ನಡೆಯಲಿರುವುದು.
ಅಲ್.ಮದೀನಾ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ಹಾಗೂ ರಾಜ್ಯ ಕೋಶಾಧಿಕಾರಿ ಶರೀಫ್ ಬೆಂಗಳೂರು ತರಗತಿಯನ್ನು ನಡೆಸಲಿದ್ದಾರೆ ಎಂದು ರಾಜ್ಯ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.