ಬಜರಂಗದಳ, ಆರ್‌ಎಸ್‌ಎಸ್ ನವರು ಉಗ್ರಗಾಮಿಗಳು: ಸಿಎಂ

ಚಾಮರಾಜನಗರ: ‘ಬಜರಂಗದಳ, ಆರ್‌ಎಸ್‌ಎಸ್ ಕಾರ್ಯಕರ್ತರು ಉಗ್ರಗಾಮಿಗಳು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.ಸಾಧನಾ ಸಮಾವೇಶದಲ್ಲಿ ಭಾಗವಹಿಸಲು ತಾಲ್ಲೂಕಿನ ನಾಗವಳ್ಳಿ ಗ್ರಾಮಕ್ಕೆ ಬುಧವಾರ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ಪಿಎಫ್‌ಐ ಕಾರ್ಯಕರ್ತರು ಭಾಗಿಯಾಗಿರುವುದರಿಂದ ಸಂಘಟನೆಯನ್ನು ನಿಷೇಧಿಸುವಂತೆ ಬಿಜೆಪಿ ಒತ್ತಾಯಿಸುತ್ತಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದಕ್ಕೆ ಸೂಕ್ತ ದಾಖಲೆಗಳು ದೊರಕಿಲ್ಲ ಎಂದರು.

ಪಿಎಫ್‌ಐ, ಎಸ್‌ಡಿಪಿಐ, ಆರ್‌ಎಸ್‌ಎಸ್, ಬಜರಂಗದಳ, ವಿಎಚ್‌ಪಿ ಯಾವುದೇ ಸಂಘಟನೆಯಾದರೂ ಸಾಮರಸ್ಯ ಕದಡುವುದನ್ನು, ಕೋಮುವಾದಕ್ಕೆ ಪ್ರಚೋದನೆ ನೀಡುವುದನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದರು.

 

 

Leave a Reply

Your email address will not be published. Required fields are marked *

error: Content is protected !!