ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಈ ಹಿಂದೆ ಹಲವಾರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಲ್ಲಿ ಹಲವಾರು ಪ್ರಕರಣಗಳು ಇನ್ನೂ ಮುಚ್ಚಿ ಹೋಗಿದೆ. ಈ ಹಿಂದೆ ಕಾವ್ಯಾ ಪೂಜಾರಿ ಎಂಬ ಬಾಲಕಿಯು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವು ಇನ್ನೂ ಹಸಿರಾಗಿರುವಾಗಲೇ ಇದೀಗ ಇನ್ನೊಂದು ಪ್ರಕರಣ ನಡೆದಿದ್ದು, ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯು ನಡೆದಿದೆ.
ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಬೆಂಗಳೂರು ಮೂಲದ ವಿನುತಾ (18) ಎಂದು ಗುರುತಿಸಲಾಗಿದೆ,. ಈಕೆ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಪ್ರಥಮ ಪಿಯುಸಿಯಲ್ಲಿ 98 ಶೇಖಡಾ ಅಂಕ ಗಳಿಸಿದ್ದಳು. ವಿನುತಾ ಹಾಸ್ಟೆಲ್ ಕೊಠಡಿಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಸಮರ್ಪಕವಾದ ಕಾರಣವೇನೆಂದು ತಿಳಿದು ಬಂದಿಲ್ಲ. ಈ ಕುರಿತು ಸಮಿಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.















ಇನ್ನಷ್ಟು ಸುದ್ದಿಗಳು
ಪುತ್ತೂರು ಅಶ್ರಫ್ ಕಲ್ಲೇಗರಿಗೆ ಐದು ಲಕ್ಷ ಬಾಂಡ್ ಮುಚ್ಚಳಿಕೆ ಕೋರಿ ನೋಟೀಸು ಆಘಾತಕಾರಿ ಮುನೀರ್ ಕಾಟಿಪಳ್ಳ
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ಎಸ್ಡಿಪಿಐ ಹಾವೇರಿ ಜಿಲ್ಲೆ- ನೂತನ ಅಧ್ಯಕ್ಷರಾಗಿ ಜಿಲಾನಿ ಮೇದೂರು ಆಯ್ಕೆ
ಪೆನ್ನು ಹಿಡಿಯುವ ಕೈಗಳು ಗಾಂಜಾ, ಚೂರಿ ಹಿಡಿಯುತ್ತಿದೆ: ಪೋಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು-ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್
ದಕ ಜಿಲ್ಲಾ ವಕ್ಪ್ ನಿಂದ ಶಾಸಕ ಐವನ್ ಡಿ ಸೋಜ ರಿಗೆ ಅಭಿನಂದನಾ ಸಮಾರಂಭ