ಮುಂಬರುವ ಚುನಾವಣೆಯಲ್ಲಿ ಮೊದಲ ಬಾರಿಗೆ ಎಲೆಕ್ಟ್ರಾನಿಕ್ ಪೋಸ್ಟಲ್ ಬ್ಯಾಲೆಟ್‌ ಬಳಕೆ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳನ್ನೇ ಬಳಸಲಿದ್ದು, ಇದರೊಂದಿಗೆ ಇದೇ ಮೊದಲ ಬಾರಿಗೆ ಎಲೆಕ್ಟ್ರಾನಿಕ್ ಪೋಸ್ಟಲ್ ಬ್ಯಾಲೆಟ್‌ಗಳನ್ನು ಬಳಸಲಾಗುತ್ತದೆ ಎಂದು ಕೇಂದ್ರ ಚುನಾವಣೆ ಆಯೋಗದ ಮಹಾನಿರ್ದೇಶಕ ದಿಲೀಪ್‌ ಶರ್ಮಾ ಹೇಳಿದ್ದಾರೆ.

ವಿಧಾನಸೌಧದಲ್ಲಿ ನಡೆದ ಕೇಂದ್ರ ಚುನಾವಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಸರ್ವಿಸ್​​ ಮ್ಯಾನ್, ಎನ್​​ಆರ್​​ಐಗಳ ಆನ್​​ಲೈನ್ ಮತದಾನಕ್ಕೆ ಅವಕಾಶ ನೀಡಿದ್ದು, ಮತದಾನಕ್ಕೆ 3 ದಿನ ಮುಂಚಿತದವರೆಗೂ ಎನ್​​ಆರ್​​ಐಗಳ ಮತದಾರ ಪಟ್ಟಿಗೆ ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದರು.

ಚುನಾವಣೆ ಅಭ್ಯರ್ಥಿಗಳ ವೆಚ್ಚವನ್ನು 28 ಲಕ್ಷ ರೂ.ಗೆ ನಿಗದಿ ಮಾಡಲಾಗಿದ್ದು, ಹೆಚ್ಚಿನ ಹಣ ಖರ್ಚು ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಉಪಚುನಾವಣೆ ಆಯುಕ್ತ ಸಂದೀಪ್ ಸಕ್ಸೇನಾ ಮಾತನಾಡಿ, ಚುನಾವಣಾ ಪ್ರಚಾರಕ್ಕೆ ತೆರಳುವ ಪಕ್ಷಗಳು, ರಾಜಕೀಯ ಮುಖಂಡರು ಚುನಾವಣಾ ಆಯೋಗದ ಒಪ್ಪಿಗೆ ಪಡೆಯಬೇಕು. ೨೫ ಸಾವಿರ ಸೇವಾ ಮತದಾರರಿಗೆ ಪೋಸ್ಟಲ್ ಬ್ಯಾಲೆಟ್​​ಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಈ ಬಾರಿ ಎಲೆಕ್ಟ್ರಾನಿಕ್ ಮತ ಯಂತ್ರಗಳು ಜತೆಗೆ ವಿವಿ ಪ್ಯಾಟ್ ಯಂತ್ರಗಳನ್ನು ಬಳಕೆ ಮಾಡಲಾಗುತ್ತದೆ. ಇದರಿಂದ ಮತದಾರರಿಗೆ ತಾವು ಯಾರಿಗೆ ಮತದಾನ ಮಾಡಿದ್ದು ಎಂದು ಖಚಿತ ಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಅಲ್ಲದೆ, ಡಿಜಿಟಲ್ ಮ್ಯಾಪ್ ಬಳಕೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಕೇಂದ್ರ ಉಪಚುನಾವಣಾ ಆಯುಕ್ತ ಉಮೇಶ್ ಸಿನ್ಹಾ ಮಾತನಾಡಿ, ಗುರುತಿನ ಸಂಖ್ಯೆ ಬಗ್ಗೆ ತಿಳಿಯುವ ಚುನಾವಣಾ ಆ್ಯಪ್ ಬಿಡುಗಡೆ ಮಾಡಲಾಗಿದ್ದು, 9731979898 ಸಂಖ್ಯೆಗೆ ಎಸ್​​ಎಂಎಸ್ ಕಳುಹಿಸಿದರೆ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆ, ಸಂಖ್ಯೆ, ವಿಳಾಸ ಸೇರಿದಂತೆ ಚುನಾವಣಾ ಮಾಹಿತಿ ದೊರೆಯಲಿದೆ ಎಂದು ತಿಳಿಸಿದರು.

ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್, ದೀರೇಂದ್ರ ಓಝ, ನಿಖಿಲ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭ, ರಾಜ್ಯ ಪೋಲಿಸ್ ಮಹಾನಿರ್ದೇಶಕಿ ನೀಲಮಣಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!