ಬೆಂಗಳೂರು : (ಜನಧ್ವನಿ ವಾರ್ತೆ) ಭೀಕರ ಮಳೆಯಿಂದ ತತ್ತರಿಸಿ ಮನೆಗಳನ್ನು ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿರುವ ಕೊಡಗಿನ ಜನತೆಗೆ ವಸತಿ ಸೌಲಭ್ಯಗಳನ್ನು ಒದಗಿಸಿಕೊಡಲು ಕೊಡಗು ಜಿಲ್ಲಾ ಪಂಚಾಯತ್ ಸದಸ್ಯರೂ, ಕೊಡಗು ಜಿಲ್ಲಾ ಸುನ್ನೀ ಮ್ಯಾನೇಜ್ಮೆಂಟ್ ಅಧ್ಯಕ್ಷರೂ ಆಗಿರುವ ಪಿ.ಎಂ ಅಬ್ದುಲ್ ಲತೀಫ್ ಶುಂಠಿಕೊಪ್ಪರವರು ತನ್ನ ಬೆಲೆಬಾಳುವ ಒಂದು ಎಕರೆ ಸ್ಥಳವನ್ನು ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ರವರಿಗೆ ಹಸ್ತಾಂತರಿಸಿದರು.

ಕೊಡಗಿನ ಸಂತ್ರಸ್ತ ಜನತೆಗೆ ಜಾತಿ,ಧರ್ಮ ಬೇಧ ಭಾವವಿಲ್ಲದೆ ಎಸ್ಸೆಸ್ಸಫ್, ಎಸ್ ವೈ ಎಸ್ ಹಾಗೂ ಕೆಸಿಎಫ್ ಸಂಘಟನೆಗಳು ಜಂಟಿಯಾಗಿ ಸರ್ಕಾರದ ಸಹಭಾಗಿತ್ವದಲ್ಲಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ಯೋಜನೆಯನ್ನು ಕೈಗೊಂಡಿದೆ.

ಈ ಸಂದರ್ಭದಲ್ಲಿ ವಸತಿ ಸಚಿವ ಯು.ಟಿ ಖಾದರ್, ಸಿ.ಎಂ ಇಬ್ರಾಹಿಂ ತನ್ವೀರ್ ಹಾಶಿಂ, ಮಾಜಿ ಸಚಿವ ರೋಶನ್ ಬೇಗ್, ಮಾಜಿ ಎಂ ಎಲ್ ಸಿ ಸತ್ತಾರ್ ಸೇಠ್, ಕರ್ನಾಟಕ ವಕ್ಫ್ ಬೋರ್ಡ್ ಮಾಜಿ ಸದಸ್ಯ ಮೌಲಾನ ಎನ್.ಕೆ.ಎಂ ಶಾಫಿ ಸ ಅದಿ ಬೆಂಗಳೂರು, ಎಸ್ಸೆಸ್ಸಫ್ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ, ಸಹಿತ ಹಲವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ