ಮಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಲಿದ್ದು, ನಾಳೆಯಿಂದ 5 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಮಲೆನಾಡು ಹಾಗೂ ಕರಾವಳಿ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡು, ಲಕ್ಷದ್ವೀಪದಲ್ಲಿ ಗಾಳಿ ಮಳೆಯಾಗಲಿದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ಸಮುದ್ರಕ್ಕೆ ತೆರಳಿರುವ ಮೀನುಗಾರರನ್ನು ಕೂಡಲೇ ಕರೆಸುವಂತೆ ಕೇಂದ್ರ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತಕ್ಕೆ ಸೂಚಿಸಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.