ಪುತ್ತೂರು:ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ವತಿಯಿಂದ ದರ್ಸ್, ದಅವಾ, ಶರೀಅತ್ ಕಾಲೇಜು ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗಾಗಿ ಸಂಘಟಿಸಿರುವ knowscho-18 ಕಾರ್ಯಕ್ರಮ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಡಗುರವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 25 ಗುರುವಾರ ಬೆಳಿಗ್ಗೆ 10:00 ಗಂಟೆಗೆ ಮಿತ್ತೂರು ಕೆ.ಜಿ.ಎನ್ ಸಭಾಂಗಣದಲ್ಲಿ ನಡೆಯಲಿರುವುದು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಟೀಮ್ ಹಸನೈನ್ ಮಾಹಿತಿಯನ್ನು ನೀಡಲಿರುವರು
ಎಸ್ಸೆಸ್ಸೆಫ್ ರಾಜ್ಯ ಚುನಾವಣಾ ಮಂಡಳಿ ಕನ್ವೀನರ್ ಹಾಫಿಳ್ ಯಾಕೂಬ್ ಸ ಅದಿ ನಾವೂರು ಚುನಾವಣಾ ಪ್ರಕ್ರಿಯೆಯ ಬಗ್ಗೆ ಮಾಹಿತಿಯನ್ನು ನೀಡಲಿರುವರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಶರೀಫ್ ಮಾಸ್ಟರ್ ಬೆಂಗಳೂರು,ರಾಜ್ಯ ಚುನಾವಣಾ ಮಂಡಳಿ ಟೆಕ್ನಿಕಲ್ ಆಫೀಸರ್ ರವೂಫ್ ಖಾನ್ ಉಡುಪಿ,ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ಕನ್ಯಾನ ,ರಾಜ್ಯ ಸದಸ್ಯರಾದ ಶಾಕಿರ್ ಹಾಜಿ ಮಿತ್ತೂರು,ಅಬ್ದುಲ್ ರಹಿಮಾನ್ ಮೊಗರ್ಪಣೆ ಮೊದಲಾದವರು ಭಾಗವಹಿಸಲಿದ್ದಾರೆ.
ಟೀಂ ಹಸನೈನ್ ಹಾಗೂ ಚುನಾವಣಾ ಮಾಹಿತಿಗಾಗಿ ಸಂಘಟಿಸಿರುವ ಪ್ರಸ್ತುತ ಕಾರ್ಯಕ್ರಮದಲ್ಲಿ ಪ್ರತಿ ದರ್ಸ್, ದ ಅವಾ ಕಾಲೇಜು, ಶರೀಅತ್ ಕಾಲೇಜು ಗಳಿಂದ ತಲಾ ಐದು ವಿದ್ಯಾರ್ಥಿಗಳು ಭಾಗವಹಿಸಬೇಕಾಗಿದೆ ಎಂದು ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ