ಪುತ್ತೂರು: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಇತ್ತೀಚೆಗೆ ಮರಣ ಹೊಂದಿದ ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಮರ್ಹೂಂ ರಫೀಕ್ ಸಖಾಫಿ ಚೆರಿಯಪರಂಬು ರವರ ಅನುಸ್ಮರಣಾ ಸಂಗಮವು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿರವರ ಅಧ್ಯಕ್ಷತೆಯಲ್ಲಿ ನವೆಂಬರ್ 16 ಶುಕ್ರವಾರ ಮಧ್ಯಾಹ್ನ 3:00 ಗಂಟೆಗೆ ಕೆ.ಜಿ.ಎನ್ ಮಿತ್ತೂರಿನಲ್ಲಿ ನಡೆಯಲಿರುವುದು.
ಸಯ್ಯದ್ ಶಿಹಾಬುದ್ದೀನ್ ಸಖಾಫಿ ಅಲ್ ಹೈದ್ರೋಸಿ ತಂಙಳ್ ಕಿಲ್ಲೂರು ದುವಾಶೀರ್ವಚನ ನಡೆಸಲಿರುವರು.
ಕೆ.ಜಿ.ಎನ್ ಮಿತ್ತೂರು ಸಂಸ್ಥೆಯ ಶಿಲ್ಪಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.
ಎಸ್ಸೆಸ್ಸೆಫ್ ಕೇರಳ ರಾಜ್ಯಾಧ್ಯಕ್ಷ ಡಾ ಫಾರೂಕ್ ನ ಈಮಿ ಅಲ್ ಬುಖಾರಿ ಕೊಲ್ಲಂ ಅನುಸ್ಮರಣಾ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಎಸ್.ವೈ.ಎಸ್ ರಾಜ್ಯಾಧ್ಯಕ್ಷ ಜಿ.ಎಂ.ಮುಹಮ್ಮದ್ ಕಾಮಿಲ್ ಸಖಾಫಿ,ಎಸ್ಸೆಸ್ಸೆಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಎಂ.ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ,ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಡ್ವಕೇಟ್ ಇಲ್ಯಾಸ್ ನಾವುಂದ,ಕೋಶಾಧಿಕಾರಿ ಶರೀಫ್ ಮಾಸ್ಟರ್ ಬೆಂಗಳೂರು,ಉಪಾಧ್ಯಕ್ಷರುಗಳಾದ ಸಯ್ಯದ್ ಸಿ.ಟಿ.ಎಂ ಉಮ್ಮರ್ ಅಸ್ಸಖಾಫ್ ತಂಙಳ್ ಮನ್ಶರ್,ಸಯ್ಯದ್ ಹಾಮಿಮ್ ತಂಙಳ್ ಚಿಕ್ಕಮಂಗಳೂರು,ಕಾರ್ಯದರ್ಶಿಗಳಾದ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ,ಹಮೀದ್ ಮುಸ್ಲಿಯಾರ್ ನಗರ,ಕ್ಯಾಂಪಸ್ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ ,ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಸಿರಾಜುದ್ದೀನ್ ಸಖಾಫಿ ಕನ್ಯಾನ,ಎಸ್ಸೆಸ್ಸೆಫ್ ರಾಜ್ಯ ಸದಸ್ಯರಾದ ಹಾಫಿಳ್ ಯಾಕೂಬ್ ಸ ಅದಿ ನಾವೂರು,ಅಡ್ವಕೇಟ್ ಶಾಕಿರ್ ಹಾಜಿ ಮಿತ್ತೂರು ಹಾಗೂ ಇನ್ನಿತರ ಉಲಮಾ ,ಉಮರಾ ನಾಯಕರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.