ಗಲಭೆ ಸೃಷ್ಟಿಸಿ ಅಧಿಕಾರಕ್ಕೇರಲು ಬಿಜೆಪಿ ಹಂಬಲ: ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಅಧಿಕಾರಕ್ಕೆ ಬರಲೇಬೇಕು ಎಂಬ ಹಂಬಲದಿಂದ ರಾಜ್ಯದಲ್ಲಿ  ಬಿಜೆಪಿ ನಾಯಕರು ಕೋಮುಗಲಭೆಗಳನ್ನು ಸೃಷ್ಟಿಸುತ್ತಿದ್ದು. ಅದರೆ, ಇದಕ್ಕೆ ಮತದಾರರು ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಕಾಂಗ್ರೆಸ್‌ನ ಯಶವಂತಪುರ ವಿಧಾನಸಭಾ ಕ್ಷೇತ್ರ ಘಟಕದಿಂದ ಸೋಮನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ‘ಮನೆ ಮನೆಗೆ ಕಾಂಗ್ರೆಸ್’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರವು ಸುಳ್ಳು ಭರವಸೆಗಳ ಮೂಲಕ ಮತದಾರರನ್ನು ದಿಕ್ಕುತಪ್ಪಿಸುತ್ತಿದೆ. ಪ್ರಧಾನಿ ಮೋದಿ ಅವರು ನೋಟು ರದ್ದತಿ ಮೂಲಕ ದೇಶದ ಅರ್ಥ ವ್ಯವಸ್ಥೆಯನ್ನು ಕುಸಿಯುವಂತೆ ಮಾಡಿದ್ದಾರೆ ಎಂದು ದೂರಿದರು.

ಶಾಸಕ ಎಸ್.ಟಿ.ಸೋಮಶೇಖರ್, ‘ಸರ್ಕಾರಿ ಭೂಮಿಯಲ್ಲಿ ಅನೇಕ ವರ್ಷಗಳಿಂದ ಉಳುಮೆ ಮಾಡುತ್ತಿರುವ ಹಾಗೂ ಉಳುಮೆ ಚೀಟಿ ಪಡೆದಿರುವ ರೈತರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಸುಳ್ಳು ದಾಖಲೆ ನೀಡಿ ಉಳುಮೆ ಚೀಟಿ ಪಡೆದಿರುವ ಶ್ರೀಮಂತರು ಹಾಗೂ ಪ್ರಭಾವಿಗಳಿಗೆ ಯಾವುದೇ ಕಾರಣಕ್ಕೂ ಭೂಮಿ ನೀಡುವುದಿಲ್ಲ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

Leave a Reply

Your email address will not be published. Required fields are marked *

error: Content is protected !!