ಮಂಗಳೂರು:ಸುಮಾರು 7 ದಶಕ ಗಳ ತನಕ ದಕ್ಷಿಣ ಕರ್ನಾಟಕದ ಉಳ್ಳಾಲದಲ್ಲಿ ಬಂದು ದೀನೀ ಪ್ರಭೋದನೆಯೊಂದಿಗೆ ರಾಷ್ಟ್ರಾದ್ಯಂತ ಅಹ್ಲು ಸುನ್ನತ್ ವಲ್-ಜಮಾಅತ್ ನೆಲೆಯೂರಲು ಕಾರಣಕರ್ತರಾದ ಆಧ್ಯಾತ್ಮಿಕ ನಾಯಕ ಮರ್ಹೂಂ ಸಯ್ಯದ್ ತಾಜುಲ್ ಉಲಮಾ ಅಬ್ದುರಹ್ಮಾನ್ ಕುಂಞಿಕೋಯ ತಂಙಳ್ ಅಲ್ ಬುಖಾರಿರವರ 5 ನೇ ಉರೂಸ್ ಡಿಸೆಂಬರ್ 7,8,9 ಎಂಬೀ ದಿನಾಂಕಗಳಲ್ಲಿ ಎಟ್ಟಿಕುಲಂನಲ್ಲಿ ನಡೆಯುತ್ತದೆ.
ಉನ್ನತ ಸಾದಾತ್ ಗಳು,ಉನ್ನತ ಉಲಮಾ,ಉಮರಾ ನೇತಾರರು,ಸಂಘಟನಾ ನಾಯಕರು ಭಾಗವಹಿಸುವ ಈ ಉರೂಸ್ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಇರುವ ಎಲ್ಲಾ ಸುನ್ನೀ ಕುಟುಂಬದ ನಾಯಕರು,ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಡಗು ಕರೆ ನೀಡಿದ್ದಾರೆ.
ಉರೂಸ್ ಪ್ರಯುಕ್ತ ಡಿಸೆಂಬರ್ 7 ಶುಕ್ರವಾರ ಬೆಳಿಗ್ಗೆ 7:00 ಗಂಟೆಗೆ ಉಳ್ಳಾಲ ಸಯ್ಯದ್ ಮದನಿ ಝಿಯಾರತ್ ನೊಂದಿಗೆ ಸಂದಲ್ ಜಾಥಾವು ಸಯ್ಯದ್ ಇಸ್ಮಾಯಿಲ್ ತಂಙಳ್ ಉಜಿರೆ,ಮುಹಿಯ್ಯದ್ದೀನ್ ಕಾಮಿಲ್ ಸಖಾಫಿ ತೋಕೆ,ಸಯ್ಯದ್ ಖುಬೈಬ್ ತಂಙಳ್ ಉಳ್ಳಾಲ,ಸಿರಾಜುದ್ದೀನ್ ಸಖಾಫಿ ಕನ್ಯಾನರವರ ನೇತೃತ್ವದಲ್ಲಿ ಎಟ್ಟಿಕುಲಂಗೆ ಹೊರಡಲಿದೆ.ಸುನ್ನೀ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಶುಕ್ರವಾರ ಬೆಳಿಗ್ಗೆ 6:30 ಗಂಟೆಗೆ ಉಳ್ಳಾಲ ಸಯ್ಯದ್ ಮದನಿ ದರ್ಗಾ ವಠಾರಕ್ಕೆ ವಾಹನಗಳೊಂದಿಗೆ ಬಂದು ಸಹಕರಿಸುವಂತೆ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಡಗು ಹಾಗೂ ಪ್ರಧಾನ ಕಾರ್ಯದರ್ಶಿ ಅಡ್ವಕೇಟ್ ಇಲ್ಯಾಸ್ ನಾವುಂದ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ