janadhvani

Kannada Online News Paper

ಹೊಸದಿಲ್ಲಿ: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ಬಿಎಸ್‌ಪಿ ನಾಯಕಿ ಮಾಯಾವತಿಪ್ರಕಟಿಸಿದ್ದಾರೆ. ಮಂಗಳವಾರ ಪ್ರಕಟವಾದ ಚುನಾವಣಾ ಫಲಿತಾಂಶದಲ್ಲಿ, 230 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್‌ 114 ಸ್ಥಾನಗಳನ್ನು ಗೆದ್ದು ಬಹುಮತಕ್ಕೆ ಎರಡು ಸೀಟುಗಳ ಕೊರತೆ ಎದುರಿಸುತ್ತಿದೆ. ಬಿಎಸ್ಪಿ ಇಬ್ಬರು ಶಾಸಕರನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಮಾಯಾವತಿ ಬೆಂಬಲ ಘೋಷಣೆ ಮಹತ್ವದ ಬೆಳವಣಿಗೆಯಾಗಿದ್ದು, ಕಾಂಗ್ರೆಸ್‌ಗೆ ಬಹುಮತ ಲಭ್ಯವಾಗಿದೆ. 

ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಈ ನಿರ್ಧಾರ ಕೈಗೊಂಡಿರುವುದಾಗಿ ಮಾಯಾವತಿ ಹೇಳಿದ್ದಾರೆ. 

ಅಗತ್ಯವೆನಿಸಿದರೆ ರಾಜಸ್ಥಾನದಲ್ಲೂ ಕಾಂಗ್ರೆಸ್‌ಗೆ ಬೆಂಬಲ ನೀಡಲು ಸಿದ್ಧ ಎಂದು ಮಾಯಾವತಿ ಸ್ಪಷ್ಟಪಡಿಸಿದ್ದಾರೆ. ಆದರೆ ರಾಜಸ್ಥಾನದಲ್ಲಿ ಕಾಂಗ್ರೆಸ್ ಸ್ವಂತ ಬಲದಲ್ಲೇ ಸರಕಾರ ರಚಿಸುವಷ್ಟು ಬಹುಮತ ಪಡೆದಿದೆ. 

ಐದು ರಾಜ್ಯಗಳ ಫಲಿತಾಂಶಗಳು ಬಿಜೆಪಿ ವಿರುದ್ಧದ ಜನಾದೇಶವಾಗಿದೆ. ಅದರಲ್ಲೂ ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದ ಜನತೆ ಬಿಜೆಪಿ ಮತ್ತು ಅದರ ಜನವಿರೋಧಿ ನೀತಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ. ಆದರೆ ಪರ್ಯಾಯ ಆಯ್ಕೆಯಿಲ್ಲದೆ ಕಾಂಗ್ರೆಸ್ ಅನ್ನು ಬೆಂಬಲಿಸಿದ್ದಾರೆ ಎಂದು ಬಿಎಸ್ಪಿ ನಾಯಕಿ ನುಡಿದರು. 

error: Content is protected !! Not allowed copy content from janadhvani.com