ನವದೆಹಲಿ: ರಾಜಸ್ತಾನದಲ್ಲಿ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಇದುವರೆಗೆ ರಾಜ್ಯದ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ವಿಚಾರ ಇನ್ನು ಕಗ್ಗಂಟಾಗಿ ಉಳಿದಿದೆ. ಈ ಹಿನ್ನಲೆಯಲ್ಲಿ ಈ ವಿಚಾರವಾಗಿ ನಾಳೆ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಅಂತಿಮ ನಿರ್ಧಾರ ತಗೆದುಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ರಾಜಸ್ತಾನದಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಪಡೆದಿದೆ. ಬಹುಮತಕ್ಕೆ ಇನ್ನು ಒಂದು ಸ್ಥಾನದ ಅಗತ್ಯವಿದೆ. ಇದಕ್ಕೆ ಕಾಂಗ್ರೆಸ್ ನ ಮೈತ್ರಿ ಪಕ್ಷವಾದ ಆರ್ಎಲ್ಡಿ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿರುವುದರಿಂದ ಬೆಂಬಲ ನೀಡಲಿದೆ ಎನ್ನಲಾಗಿದೆ.ಈಗಾಗಲೇ ಕಾಂಗ್ರೆಸ್ ನಾಯಕರು ಇಂದು ಸಂಜೆ ರಾಜ್ಯಪಾಲ ಕಲ್ಯಾಣ ಸಿಂಗ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆ ಮಾಡುವ ಪ್ರಸ್ತಾವನೆ ಇಟ್ಟಿದ್ದಾರೆ.ಆದರೆ ಮುಖ್ಯಮಂತ್ರಿ ಯಾರು ಎನ್ನುವ ವಿಚಾರ ಇನ್ನು ಸ್ಪಷ್ಟವಾಗದಿರುವುದರಿಂದ ಈ ವಿಚಾರವಾಗಿ ಅಂತಿಮ ನಿರ್ಧಾರವನ್ನು ತಗೆದುಕೊಳ್ಳಲು ರಾಹುಲ್ ಗಾಂಧಿಯವರಿಗೆ ನೀಡಲಾಗಿದೆ.
ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿನ್ ಪೈಲೆಟ್ ” ಶಾಸಕರು ಏನು ಹೇಳುಬೇಕೋ ಅದೆಲ್ಲವನ್ನು ಕೂಡ ಮೀಟಿಂಗ್ ನಲ್ಲಿ ಹೇಳಲಿ ಆದರೆ ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಮುಖಸ್ಥರು ಹಾಗೂ ಇತರ ನಾಯಕರು ತಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ