ನವದೆಹಲಿ (ಡಿ. 17): ಪಂಚರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದು ಒಂದು ವಾರ ಕಳೆದಿದೆ. 5 ರಾಜ್ಯಗಳಲ್ಲಿ 3 ಕಡೆ ಜಯಭೇರಿ ಬಾರಿಸಿದ್ದ ಕಾಂಗ್ರೆಸ್ಗೆ ಇಂದು ವಿಶೇಷವಾದ ದಿನ. ಒಂದರ ನಂತರ ಒಂದು ರಾಜ್ಯಗಳಲ್ಲಿ ಇಂದು ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿಗಳು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ದೇಶದ 3 ಪ್ರಮುಖ ರಾಜ್ಯಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿರುವ ಕಾಂಗ್ರೆಸ್ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಧೂಳೀಪಟ ಮಾಡಿತ್ತು. ಆ ಸಂಭ್ರಮದಲ್ಲಿ ತೇಲುತ್ತಿರುವ ಕಾಂಗ್ರೆಸ್ ನಾಯಕರಿಗೆ ಇಂದು ಮತ್ತೊಂದು ಸಂಭ್ರಮ. ಒಂದೇ ದಿನ ಮೂರು ರಾಜ್ಯಗಳಲ್ಲಿ ಇಂದು ಕಾಂಗ್ರೆಸ್ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದೆ.
ರಾಜಸ್ಥಾನದಿಂದ ಆರಂಭ:
ಇಂದು ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಗದ್ದುಗೆಗೆ ಏರಲಿದೆ. ಬೆಳಗ್ಗೆ 10 ಗಂಟೆಗೆ ರಾಜಸ್ಥಾನದಿಂದ ಪ್ರಮಾಣವಚನ ಸ್ವೀಕಾರ ಸಮಾರಂಭ ಆರಂಭವಾಗಲಿದ್ದು, ಬಳಿಕ ಮಧ್ಯಪ್ರದೇಶ, ಛತ್ತೀಸ್ಗಢದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಮೂರೂ ರಾಜ್ಯಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಪಾಲ್ಗೊಳ್ಳುವ ಸಾಧ್ಯತೆಯಿದೆ.
ಬೆಳಗ್ಗೆ 10 ಗಂಟೆಗೆ ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿಯಾಗಿ ಹಾಗೂ ಸಚಿನ್ ಪೈಲಟ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೈಪುರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ದೇಶದ ಪ್ರಮುಖ ಬಿಜೆಪಿಯೇತರ ನಾಯಕರು ಪಾಲ್ಗೊಳ್ಳಲಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ದೇವೇಗೌಡ, ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲ, ಬಿಹಾರದ ವಿರೋಧಪಕ್ಷದ ನಾಯಕ ತೇಜಸ್ವಿ ಯಾದವ್ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹಾಗೇ, ದೆಹಲಿಯ ಅರವಿಂದ್ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್ ಕೂಡ ಆಗಮಿಸುವ ಸಾಧ್ಯತೆಯಿದೆ.
ಮಧ್ಯಾಹ್ನ 1 ಗಂಟೆಯ ವೇಳೆಗೆ ಮಧ್ಯಪ್ರದೇಶದ ಭೂಪಾಲ್ನಲ್ಲಿ ಕಮಲನಾಥ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ಸಂಜೆ 4 ಗಂಟೆಗೆ ಛತ್ತೀಸ್ಗಢದ ರಾಯ್ಪುರದಲ್ಲಿ ಭೂಪೇಶ್ ಬಾಘೆಲ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಮಧ್ಯಪ್ರದೇಶದ ಭೂಪಾಲ್ನ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ಶಾಸಕ ದಿನೇಶ್ ತ್ರಿವೇದಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿನ ಸಿಎಂ ಮಮತಾ ಬ್ಯಾನರ್ಜಿ ಅನುಪಸ್ಥಿತಿಯ ಹಿನ್ನೆಲೆಯಲ್ಲಿ ಅವರ ಪ್ರತಿನಿಧಿಯಾಗಿ ದಿನೇಶ್ ತ್ರಿವೇದಿ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಬಹುಮತ ಪಡೆಯಲು ಬೆಂಬಲ ನೀಡಿದ್ದ ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರ ಅನುಪಸ್ಥಿತಿಗೆ ಕಾರಣವೇನೆಂದು ತಿಳಿದುಬಂದಿಲ್ಲ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ
ಪರೀಕ್ಷೆಗೂ ಹಿಜಾಬ್ ಗೂ ಸಂಬಂಧವಿಲ್ಲ- ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ
ಜನಾದೇಶವಿಲ್ಲದೆ ಬಿಜೆಪಿಗೆ ಗೆಲುವು: ಇದು ಇವಿಎಂ ದುರ್ಬಳಕೆ- ಸಂಘಟಿತ ಹೋರಾಟಕ್ಕೆ ಕಾಂಗ್ರೆಸ್ಗೆ ದೀದಿ ಆಹ್ವಾನ