ನವದೆಹಲಿ (ಡಿ.27): ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿದ್ದು ವಿವಾದಾತ್ಮಕ ತ್ರಿವಳಿ ತಲಾಖ್ ಮಸೂದೆ ಕುರಿತು ಚರ್ಚೆ ನಡೆಸಲಿದೆ.
ಈ ಮಸೂದೆ ಕುರಿತು ಚರ್ಚೆ ಮಾಡಲು ಸಂಸದರು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿ ಈಗಾಗಲೇ ಬಿಜೆಪಿ ತ್ರಿ ಲೈನ್ ವಿಪ್ ಜಾರಿಮಾಡಿದೆ.
ಕಳೆದ ವಾರ ಲೋಕಸಭೆಯಲ್ಲಿ ಈ ಮಸೂದೆ ಮಂಡನೆ ಚರ್ಚೆಯಲ್ಲಿ ಭಾಗಿಯಾಗುವುದಾಗಿ ಕಾಂಗ್ರೆಸ್ ಸಮ್ಮತಿ ಸೂಚನೆ ನೀಡಿತು. ವಿಪಕ್ಷಗಳಿಂದ ಈ ಚರ್ಚೆಗೆ ಯಾವುದೇ ಅಡ್ಡಿಯಾಗುವುದಿಲ್ಲ ಎಂಬ ಭರವಸೆ ಕೂಡ ನೀಡಲಾಗಿತ್ತು.ಈ ಕುರಿತು ಚರ್ಚೆ ಮಾಡಲು ಕಾಂಗ್ರೆಸ್ ಕೂಡ ತಮ್ಮ ಸಂಸದರಿಗೆ ವಿಪ್ ಜಾರಿ ಮಾಡಿತು.
ಇನ್ನು ಈ ಕುರಿತು ಒಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ನಾವು ಈ ಕುರಿತು ಚರ್ಚೆಯಲ್ಲಿ ಭಾಗಿಯಾಗಿ ನಮ್ಮ ಅಭಿಪ್ರಾಯವನ್ನು ನೀಡುತ್ತೇವೆ. ಧರ್ಮದ ವಿಷಯದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಬಾರದು ಎಂದು ಕೂಡ ನಾವು ಮನವಿ ಮಾಡುತ್ತೇವೆ ಎಂದರು.
ತ್ರಿವಳಿ ತಲಾಖ್ ಅಪರಾಧ ಎಂದು ಘೋಷಿಸಲು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ನೀಡಲು ಸಮ್ಮತಿ ಸೂಚಿಸಿತ್ತು. ತ್ರಿವಳಿ ತಲಾಖ್ ಕಾನೂನು ಬಾಹಿರ ಮತ್ತು ಜಾಮೀನು ರಹಿತ ಕ್ರಿಮಿನಲ್ ಅಪರಾಧವಾಗಿದ್ದು, ತಲಾಖ್ ನೀಡುವ ಮುಸ್ಲಿಂ ಪುರಷರಿಗೆ ಜೈಲು ಶಿಕ್ಷೆಯನ್ನು ಈ ಮಸೂದೆ ಪ್ರಸ್ತಾಪಿಸಿದೆ. ಈ ಹಿಂದೆ ಈ ಮಸೂದೆ ಲೋಕಸಭೆಯಲ್ಲಿ ಮಂಡನೆಯಾಗಿ ಅನುಮೋದನೆ ಪಡೆದಿತ್ತು. ಆದರೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಿರಲಿಲ್ಲ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ