ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಎಸ್ಎಸ್ಎಫ್ ಬಂಟ್ವಾಳ ಡಿವಿಷನ್ ವಾರ್ಷಿಕ ಮಹಾಸಭೆ ಇತ್ತೀಚೆಗೆ ಬಿಸಿ ರೋಡಿನ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಉಪಾಧ್ಯಕ್ಷರಾದ ಸೆರ್ಕಳ ಇಬ್ರಾಹಿಂ ಸಖಾಫಿ ದುವಾಗೈದು ಡಿವಿಷನ್ ಮಾಜಿ ಅಧ್ಯಕ್ಷರಾದ ಟಿ.ಕೆ ಇಸ್ಮಾಯಿಲ್ ಸಅದಿ ಉಧ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿವಿಷನ್ ಅಧ್ಯಕ್ಷರಾದ ಅಬ್ದುಲ್ ರಶೀದ್ ಹಾಜಿ ವಗ್ಗ ವಹಿಸಿದ್ದರು.

ಪ್ರಧಾನ ಕಾರ್ಯದರ್ಶಿ ಆಬಿದ್ ನಈಮಿ ವರದಿ ವಾಚಿಸಿದರು. ಕೋಶಾಧಿಕಾರಿ ರಫೀಕ್ ಝುಹುರಿ ಲೆಕ್ಕಪತ್ರ ಮಂಡಿಸಿ ತಕ್ಬೀರ್ ಧ್ವನಿಯೊಂದಿಗೆ ಅಂಗೀಕರಿಸಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಅಲಿ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಹಾರಿಸ್ ಪೆರಿಯಪಾದೆ, ಕೋಶಾಧಿಕಾರಿಯಾಗಿ ಅಲಿ ಮದನಿ ಸೆರ್ಕಳ ಹಾಗೂ ಕ್ಯಾಂಪಸ್ ಕಾರ್ಯದರ್ಶಿಯಾಗಿ ಮೌಸೂಫ್ ಅಬ್ದುಲ್ಲ ಇವರನ್ನೊಳಗೊಂಡ 21 ಸದಸ್ಯರ ಕಾರ್ಯಾಕಾರಿ ಸಮಿತಿಯನ್ನು ರಚಿಸಲಾಯಿ.ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮಂಜನಾಡಿ ವೀಕ್ಷಕರಾಗಿ ಆಗಮಿಸಿದ್ದರು. ಜಿಲ್ಲಾ ಸದಸ್ಯರಾದ ಅಬ್ದುಲ್ ಮಜೀದ್ ಸಖಾಫಿ ಸಂಘಟನಾ ತರಗತಿ ನಡೆಸಿದರು. ಜಿಲ್ಲಾ ಕಾರ್ಯದರ್ಶಿ ಶರೀಫ್ ನಂದಾವರ, ಜಿಲ್ಲಾ ಸದಸ್ಯರಾದ ಜಬ್ಬಾರ್ ಕಣ್ಣೂರು ಉಪಸ್ಥಿತರಿದ್ದರು.ಕೊನೆಯಲ್ಲಿ ಹಾರಿಸ್ ಪೆರಿಯಪಾದೆ ವಂದಿಸಿದರು.