ಮಂಗಳೂರು – 800 ಕ್ಕೂ ಹೆಚ್ಚು ಲೋಡ್ ಅಕ್ರಮ ಮರಳು ವಶಕ್ಕೆ

ಮಂಗಳೂರು, ಜ.16-ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶಗಳಲ್ಲಿ ಅಕ್ರಮ ಮರಳು ಸಾಗಣೆ ದಂಧೆ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಜಿಲ್ಲಾಡಳಿತ ಕಳೆದ ಎರಡು ದಿನಗಳ ಅವಧಿಯಲ್ಲಿ 800ಕ್ಕೂ ಹೆಚ್ಚು ಟ್ರಕ್ ಲೋಡ್ ಮರಳು, ಒಂದು ಯಂತ್ರ ಮತ್ತು ಹಲವಾರು ಲಾರಿಗಳನ್ನು ವಶಪಡಿಸಿಕೊಂಡಿದೆ. ಮಂಗಳೂರು ತಾಲ್ಲೂಕಿನ ಮರವೂರು ಡ್ಯಾಂ ಬಳಿ ಇದ್ದ ಐದು ಮರಳು ತೆಗೆಯುವ ಘಟಕಗಳನ್ನು ಪತ್ತೆ ಮಾಡಲಾಗಿದ್ದು, ಅವುಗಳಿಗೆ ಬೀಗ ಜಡಿಯಲಾಗಿದೆ.

imageಅಲ್ಲದೇ ಮರಳು ಕಳ್ಳಸಾಗಣೆಗೆ ಬಳಸುತ್ತಿದ್ದ 40 ದೋಣಿಗಳನ್ನು ಬಂಧಿಸಲಾಗಿದ್ದು, ಆರು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಉಪ ಪೊಲೀಸ್ ಆಯುಕ್ತ ಶಶಿಕಾಂತ್ ಸೆಂಥಿಲ್ ನೇತೃತ್ವದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಜನವರಿ 13ರಿಂದ ನಿನ್ನೆ ಸಂಜೆಯವರೆಗೆ ಈ ಕಾರ್ಯಾಚರಣೆ ನಡೆಸಲಾಯಿತು. ಕರಾವಳಿ ನಿಬಂಧನೆ ವಲಯದ ವ್ಯಾಪ್ತಿಯಲ್ಲಿ ಮರಳು ಸಾಗಣೆ ದಂಧೆಯ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

error: Content is protected !!