janadhvani

Kannada Online News Paper

ಬಾಬರೀ ಮಸ್ಜಿದ್ ವಿವಾದ ಪ್ರಕರಣ-ಜ. 29ಕ್ಕೆ ವಿಚಾರಣೆ ಮುಂದೂಡಿಕೆ

ದೆಹಲಿ: ಅಯೋಧ್ಯೆ ಬಾಬ್ರಿ ಮಸೀದಿ ಮತ್ತು ರಾಮ ಜನ್ಮಭೂಮಿ ವಿಚಾರಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮತ್ತೆ ಸುಪ್ರೀಂ ಕೋರ್ಟ್ ಜನವರಿ 29ಕ್ಕೆ ಮುಂದೂಡಿದೆ.
ಸಾಂವಿಧಾನಿಕ ಪೀಠದ ಐವರು ನ್ಯಾಯಮೂರ್ತಿಗಳಲ್ಲಿ ಒಬ್ಬರಾಗಿರುವ ಉದಯ್‌ ಲಲಿತ್‌ ವಿಚಾರಣೆಯಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಜ. 29ಕ್ಕೆ ಮುಂದೂಡಲಾಗಿದೆ. ಹೊಸ ಪೀಠವನ್ನು ರಚನೆ ಮಾಡಿ ಜನವರಿ 29ರಿಂದ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ತಿಳಿಸಿದ್ದಾರೆ.

ಕಲಾಪ ಆರಂಭವಾಗುತ್ತಿದ್ದಂತೆಯೇ ಮುಸ್ಲಿಂ ಪಿಟೀಶನರ್​ ಪರ ವಕೀಲರು ಪಂಚ ಸದಸ್ಯರ ಪೀಠ ರಚನೆ ಬಗ್ಗೆ ಪ್ರಶ್ನೆಯನ್ನು ಎತ್ತಿದರು. ಏಕೆಂದರೆ ಪಂಚ ಸದಸ್ಯರ ಪೀಠದಲ್ಲಿ ಇರುವ ಜಸ್ಟೀಸ್​ ಯು ಯು ಲಲಿತ್​​ ಅವರು ಅಯೋಧ್ಯೆ ಬಾಬ್ರಿ ಮಸೀದ ಧ್ವಂಸ ಪ್ರಕರಣದಲ್ಲಿ ವಕೀಲರಾಗಿದ್ದರು ಎಂದು ಆಕ್ಷೇಪ ವ್ಯಕ್ತಪಡಿಸಲಾಯಿತು. ಈ ಆಕ್ಷೇಪಣೆ ಹಿನ್ನೆಲೆಯಲ್ಲಿ ಜಸ್ಟೀಸ್​​ ಉದಯ್ ಉಮೇಶ್ ಲಲಿತ್ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

ಹೀಗಾಗಿ ಹೊಸ ಪೀಠವನ್ನು ರಚನೆ ಮಾಡಿ ಜನವರಿ 29ರಿಂದ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ತಿಳಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದಷ್ಟೇ ಅಯೋಧ್ಯೆ ವಿಚಾರಣೆಗಾಗಿ ಸಿಜೆಐ ರಂಜನ್‌ ಗೊಗೊಯಿ, ನ್ಯಾಯಮೂರ್ತಿಗಳಾದ ಎಸ್‌. ಎ. ಬೊಬ್ಡೆ, ಎನ್​. ವಿ. ರಮಣ, ಉದಯ್‌ ಉಮೇಶ್‌ ಲಲಿತ್‌ ಹಾಗೂ ಡಿ. ವೈ. ಚಂದ್ರಚೂಡ್‌ ಅವರನ್ನ ಒಳಗೊಂಡ ಪೀಠವನ್ನ ಸುಪ್ರೀಂಕೋರ್ಟ್​​ ರಚನೆ ಮಾಡಿತ್ತು. ಇದೀಗ ಮುಂದಿನ ವಿಚಾರಣೆಯನ್ನ ಜನವರಿ 29ಕ್ಕೆ ಮುಂದೂಡಿದೆ.

error: Content is protected !! Not allowed copy content from janadhvani.com