ಸಚಿವ ಅನಂತ್ ಕುಮಾರ್ ಗೆ ಗೋ ಬ್ಯಾಕ್ ಭಾಗ್ಯ…!!!

ಕಲ್ಬುರ್ಗಿ : (ಜನಧ್ವನಿ) ಸಂವಿಧಾನ ತಿದ್ದುಪಡಿ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ವಿರುದ್ಧ ದಲಿತ ಪರ ಸಂಘಟನೆಗಳ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶಿಸಿ, ಗೋ ಬ್ಯಾಕ್ ಹೆಗಡೆ ಗೋ ಬ್ಯಾಕ್ ಎಂದು ಘೋಷಣೆ ಕೂಗಿದರು.

ನಗರದ ಐವಾನ್ ಇ ಶಾಹಿ ಅತಿಥಿಗೃಹದ ಎದುರು, ದಲಿತಪರ ಮತ್ತು ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಕಪ್ಪುಬಟ್ಟೆಯೊಂದಿಗೆ ಪ್ರತಿಭಟನಾ ಪ್ರದರ್ಶನ ನಡೆಸಿದರು. ನಿಗದಿತ ಕಾರ್ಯಕ್ರದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು, ಇಲ್ಲಿನ ಐವಾನ್ ಇ ಶಾಹಿ ಅತಿಥಿಗೃಹದಲ್ಲಿ ಬಂದಿಳಿದಿದ್ದರು.

ಐವಾನ್ ಇ ಶಾಹಿ ಎದುರು ಪ್ರತಿಭಟನಾಕಾರರು ಕಪ್ಪು ಬಟ್ಟೆ ಪ್ರದರ್ಶಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು, ಈ ಮಧ್ಯೆ ಪ್ರತಿಭಟನಾ ಕಾರರನ್ನು ಸಮಧಾನ ಪಡಿಸಲು ಮುಂದಾದ ಪೊಲೀಸರೊಂದಿಗೂ ವಾದಕ್ಕಿಳಿದು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ ಹಿನ್ನಲೆಯಲ್ಲಿ ಅವರೆಲ್ಲರನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡರು.

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com
error: Content is protected !!