janadhvani

Kannada Online News Paper

ಇಂದು:ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಪಬ್ಲಿಸಿಟಿ ಕನ್ವೆನ್ಶನ್

ಮುಡಿಪು: ಜನವರಿ 27 ರಂದು ಬೆಂಗಳೂರಿನ ಖುದ್ದೂಸ್ ಈದ್ಗಾ ಮೈದಾನದಲ್ಲಿ ನಡೆಯುವ ಕರ್ನಾಟಕ ಮುಸ್ಲಿಂ ಜಮಾಅತ್ ಘೋಷಣಾ ಸಮಾವೇಶ ಹಾಗೂ ಜನವರಿ 26 ಮತ್ತು 27 ರಂದು ನಡೆಯುವ ಉಂದುಲುಸ್ ರಾಜ್ಯ ಪ್ರತಿನಿಧಿ ಸಮಾವೇಶದ ಪ್ರಚಾರಾರ್ಥ ಪಬ್ಲಿಸಿಟಿ ಕನ್ವೆನ್ಸನ್ ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ವತಿಯಿಂದ ಜನವರಿ 17 ಶುಕ್ರವಾರ ಸಂಜೆ 7:00 ಗಂಟೆಗೆ ಮುಡಿಪುವಿನ ಎಜ್ಯುಪಾರ್ಕ್ ಕ್ಯಾಂಪಸ್ ನಲ್ಲಿ ನಡೆಯಲಿರುವುದು.
ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಅಧ್ಯಕ್ಷ ತೌಸೀಫ್ ಸ ಅದಿ ಅಧ್ಯಕ್ಷತೆ ವಹಿಸಲಿರುವರು.ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಕೆ.ಪಿ ಸಿರಾಜುದ್ದೀನ್ ಸಖಾಫಿ ಕನ್ಯಾನ ಮುಖ್ಯ ಪ್ರಭಾಷಣ ಮಾಡಲಿರುವರು.ಎಸ್ಸೆಸ್ಸೆಫ್ ದ.ಕ ಜಿಲ್ಲಾ ಕಾರ್ಯದರ್ಶಿ ಜಮಾಲುದ್ದೀನ್ ಸಖಾಫಿ ಸಂದೇಶ ಭಾಷಣ ಮಾಡಲಿದ್ದಾರೆ ಎಂದು ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.