ಮುಡಿಪು : ಜನವರಿ 27 ರಂದು ಬೆಂಗಳೂರಿನ ಖುದ್ದೂಸ್ ಈದ್ಗಾ ಮೈದಾನದಲ್ಲಿ ನಡೆಯುವ ಕರ್ನಾಟಕ ಮುಸ್ಲಿಂ ಜಮಾಅತ್ ಘೋಷಣೆ ಮತ್ತು 26 ಹಾಗೂ 27ರಂದು ನಡೆಯುವ ಉಂದುಲುಸ್ ಎಸ್ಸೆಸ್ಸೆಫ್ ರಾಜ್ಯ ಪ್ರತಿನಿಧಿ ಸಮಾವೇಶದ ಪ್ರಚಾರಾರ್ಥ ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ವತಿಯಿಂದ “ಡಿವಿಶನ್ ಪಬ್ಲಿಸಿಟಿ ಕನ್ವೆನ್ಶನ್” ಮುಡಿಪುವಿನ ಮಜ್ಲಿಸ್ ಎಜ್ಯು ಪಾರ್ಕ್ ನಲ್ಲಿ ನಡೆಯಿತು.


ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ಅಧ್ಯಕ್ಷ ತೌಸೀಫ್ ಸಅದಿ ಹರೇಕಳರವರು ಅಧ್ಯಕ್ಷತೆ ವಹಿಸಿದ್ದರು. ಡಿವಿಶನ್ ಉಪಾಧ್ಯಕ್ಷ ಸಿದ್ದೀಕ್ ಸಖಾಫಿ ಕಾಯಾರ್ ಸಭೆಯನ್ನು ಉದ್ಘಾಟಿಸಿದರು. ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಜಮಾಲ್ ಸಖಾಫಿ ಮುದುಂಗಾರ್ ಕಟ್ಟೆ, ಇಬ್ರಾಹಿಂ ಅಹ್ಸನಿ ಮಂಜನಾಡಿ ಸಂದೇಶ ಭಾಷಣ ಮಾಡಿದರು.

ಎಸ್ಸೆಸ್ಸೆಫ್ ರಾಜ್ಯ ಸಮಿತಿಯ ನಾಯಕರಾದ ಸಿರಾಜುದ್ದೀನ್ ಸಖಾಫಿ ಕನ್ಯಾನ ಮುಖ್ಯ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ಎರಡು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ಸಿರಾಜುದ್ದೀನ್ ಸಖಾಫಿ ಕನ್ಯಾನ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆಯಾದ ಜಮಾಲ್ ಸಖಾಫಿ ರವರನ್ನು ಸನ್ಮಾನಿಸಲಾಯಿತು.
ಮುಡಿಪು ಡಿವಿಶನ್ ಕೋಶಾಧಿಕಾರಿ ಶರೀಫ್ ಮುಡಿಪು, ಕ್ಯಾಂಪಸ್ ಕಾರ್ಯದರ್ಶಿ ಅಬೂಸ್ವಾಲಿಹ್ ಹರೇಕಳ, ಜೊತೆ ಕಾರ್ಯದರ್ಶಿ ಮೊಯ್ದಿನ್ ಮೋರ್ಲ,ಉಳ್ಳಾಲ ಡಿವಿಶನ್ ಮಾಜಿ ನಾಯಕರಾದ ಶರೀಫ್ ಸಅದಿ ಅರಫಾ, ಅಝೀಝ್ ಎಚ್‌ಕಲ್, ಹಾಗೂ ಮುಡಿಪು ಡಿವಿಶನ್ ಡಿವಿಶನ್ ನಾಯಕರು, ಸೆಕ್ಟರ್- ಶಾಖಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಡಿವಿಶನ್ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೋಳಿಕೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ನೌಫಲ್ ಫರೀದ್‌ನಗರ ಧನ್ಯವಾದವಿತ್ತರು.















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ